ಡಿವಿಜಿ ಸುದ್ದಿ, ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಕೊರೊನಾ ವೈರಸ್ ಹೆಚ್ಚಿದ ಹಿನ್ನೆಲೆ ಸರ್ಕಾರ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಅ.30 ವರೆಗೆ ಮಧ್ಯಂತರ ರಜೆ ಘೋಷಿಸಿದೆ.
ಶಿಕ್ಷಕರ ಹಾಗೂ ಮಕ್ಕಳ ಹಿತದೃಷ್ಟಿಯಿಂದ 3 ವಾರಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ನೀಡಲಾಗಿದೆ. ಕೊರೊನಾದ ಸಂಕಷ್ಟದ ಕಾಲದಲ್ಲೂ ಶಿಕ್ಷಕರು ಶಾಲೆಗಳಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕನಿಷ್ಟ ಮಧ್ಯಂತರ ರಜೆಯನ್ನು ಅವರಿಗೆ ನೀಡಿಲ್ಲ. ಇದೀಗ ದಸರಾ ರಜೆ ಹಿನ್ನೆಲೆ ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ಸರ್ಕಾರ ಘೋಷಿಸಿದೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ @BSYBJP ಆದೇಶಿಸಿದ್ದಾರೆ pic.twitter.com/uigK7gHhQo
— CM of Karnataka (@CMofKarnataka) October 11, 2020
ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆ ನೀಡುವಂತೆ ಬೆಳಗ್ಗೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಜೆ ಘೋಷಿಸಿದ್ದಾರೆ. ಶಿಕ್ಷಕರು ನಾಳೆಯಿಂದಲೇ ರಜೆ ಪಡೆಯಬಹುದಾಗಿದೆ.



