Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಅತಿಥಿ ಶಿಕ್ಷಕರ ನೇಮಕ; ಶಿಕ್ಷಣ ಸಚಿವ ನಾಗೇಶ್

govt

ದಾವಣಗೆರೆ

ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಅತಿಥಿ ಶಿಕ್ಷಕರ ನೇಮಕ; ಶಿಕ್ಷಣ ಸಚಿವ ನಾಗೇಶ್

ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಸರ್ಕಾರ 15 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.‌ನಾಗೇಶ್ ಹೇಳಿದರು.

ದಾವಣಗೆರೆ ತಾಲ್ಲೂಕಿನ ಹಳೆ ಬಿಸಲೇರಿ ಗ್ರಾಮದಲ್ಲಿ ದಾನಿಗಳಾದ ಶ್ರೀಮತಿ ಗೌರಮ್ಮ ಕುಂದೂರು ವೀರಭದ್ರಪ್ಪ ಟ್ರಸ್ಟ್ ಹಾಗೂ ಕುಂದೂರು ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರುಗಳು ನಿರ್ಮಿಸಿರುವ ನೂತನ ಶಾಲಾ ಕಟ್ಟಡದ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಕುಗ್ಗುತ್ತಿರುವುದರಿಂದ ಸ್ಪರ್ಧೆ ಕಡಿಮೆಯಾಗಿದೆ. ಸರ್ಕಾರಿ ಶಾಲೆಯಲ್ಲಿ ಸಿಗುವಂತಹ ಉತ್ತಮ ಬೋಧಕರು ಇತರೆಡೆ ಸಿಗಲು ಸಾಧ್ಯವಿಲ್ಲ. ರಾಜ್ಯದ 45,000 ಶಾಲೆಗಳಲ್ಲಿ 29,000 ಶಾಲೆಗಳು ಸುಸಜ್ಜಿತ ಕಟ್ಟಡಗಳಿಂದ ಕೂಡಿವೆ, ಉಳಿದ ಶಾಲಾ ಕಟ್ಟಡಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ದುರಸ್ಥಿಯ ಸಮಸ್ಯೆಗಳಿವೆ.

ಮುಂದಿನ ದಿನಮಾನಗಳಲ್ಲಿ ಅವುಗಳನ್ನು ಕೂಡ ಅಭಿವೃದ್ಧಿಗೊಳಿಸಲಾಗುವುದು, ಇತ್ತೀಚಿಗೆ ನಡೆದ ಐಎಎಸ್ ಪರೀಕ್ಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವೊಂದರಲ್ಲಿ ಆಯ್ಕೆಯಾದ 24 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top