ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇನ್ನೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಇಂದು ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಬಳಿ ರಸ್ತೆಬದಿ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು.ಇನ್ನೂ ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.