ತುಮಕೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನ ಆಚರಣೆ ಬಗ್ಗೆ ಮಾಧ್ಯಮದವರು ಕೇಳಿದ್ದಕ್ಕೆ ಯಾವ ದಾಸೋಹ ದಿನ..? ಯಾರು ಆಚರಣೆ ಮಾಡಿದರು. ಹಿಂದಿನ ಸರ್ಕಾರ ಮಾಡಿದ್ದನ್ನು ನಾವು ಒಪ್ಪಿಕೊಳ್ಳಬೇಕಾ…? ಐ ಡೋಂಟ್ ನೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಕುಮಾರ ಶ್ರೀಗಳ ಬಗ್ಗೆ ಹಿಂದಿನ ಸರ್ಕಾರ ಜನವರಿ 21 ದಾಸೋಹ ದಿನವನ್ನಾಗಿ ಘೋಷಣೆ ಮಾಡಿತ್ತು. ಈ ದಿನ ಆಚರಣೆಗೆ ಸರ್ಕಾರದ ಕ್ರಮಗಳ ಬಗ್ಗೆ ಕೇಳಿದ್ದಾಗ ಹಿಂದಿನ ಸರ್ಕಾರ ಮಾಡಿದ್ದೆಲ್ಲವನ್ನೂ ನಾವು ಒಪ್ಪಿಕೊಳ್ಳಬೇಕಾ ಎಂದು ಹೇಳಿದರು. ದಾಸೋಹ ದಿನ ಎಂದರೆ ಏನೆಂದು ಗೊತ್ತಿಲ್ಲ. ಐ ಡೋಂಟ್ ನೋ ಎಂದಿದರು.
ನಾಳೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಎಲ್ಲಾ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. ಸರ್ಕಾರಿ ರಜೆ ಘೋಷಣೆ ಮಾಡೋದಿಲ್ಲ. ನಾಳೆ ಮಹದೇವಪುರದಲ್ಲಿ ನಿರ್ಮಾಣವಾಗುತ್ತಿರುವ ರಾಮ ದೇವಸ್ಥಾನಕ್ಕೆ ಆಹ್ವಾನ ಕೊಟ್ಟಿದ್ದಾರೆ ಹೋಗುತ್ತಿದ್ದೇನೆ ಎಂದರು.



