Connect with us

Dvgsuddi Kannada | online news portal | Kannada news online

ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು; ಅಪಾಯದ ಮಟ್ಟದಲ್ಲಿ‌ ನದಿ- ಜನರಿಗೆ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಸೂಚನೆ

tungabhadra river dvg

ದಾವಣಗೆರೆ

ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು; ಅಪಾಯದ ಮಟ್ಟದಲ್ಲಿ‌ ನದಿ- ಜನರಿಗೆ ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ: ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ಸ್ ನೀರು ಹರಿಯುತ್ತಿದ. ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಜನರು ನದಿಪಾತ್ರದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ತುಂಗಾ-ಭದ್ರಾದಿಂದ ಎಷ್ಟು ನೀರು ಹೊರಕ್ಕೆ..?

ತುಂಗಾ ಜಲಾಶಯದಿಂದ 68,599 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಮತ್ತು ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, 39017 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿರುತ್ತದೆ. ಪ್ರಸ್ತುತ ತುಂಗಭದ್ರ ನದಿಯಲ್ಲಿ ಅಪಾಯ ಮಟ್ಟ ಮೀರಿ 1,12,170 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲ್ಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ.

8 ಕುಟುಂಬದ 33 ಜನರನ್ನು ಸ್ಥಳಾಂತರ

ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‍ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿರುತ್ತದೆ.

ಸೆಲ್ಫಿ ತೆಗೆದುಕೊಳ್ಳವುದು ನಿಷೇಧ

ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯದಂತೆ ತಿಳಿಸಿದೆ ಹಾಗೂ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇಧಿಸಿದೆ.

ತುರ್ತು ಸಂದರ್ಭದಲ್ಲಿ ಈ ನಂಬರ್ ಗೆ ಕರೆ ಮಾಡಿ

ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಈ ಕೆಳಕಂಡ ಸಹಾಯವಾಣಿಗಳನ್ನು ತೆರೆಯಲಾಗಿದೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯ, ದಾವಣಗೆರೆ 08192-234034 ಅಥವಾ 1077 ಎಸ್‍ಡಿಆರ್‍ಎಫ್ ಘಟಕ ದೇವರಬೆಳೆಕೆರೆ 7411308591, ಆಗ್ನಿಶಾಮಕ ಇಲಾಖೆ ದಾವಣಗೆರೆ 08192-258101 ಅಥವಾ 112, ಮಹಾನಗರ ಪಾಲಿಕೆ ದಾವಣಗೆರೆ 08192-234444 ಹಾಗೂ 8277234444 (ವಾಟ್ಸ್‍ಆಪ್) ಸ್ಮಾರ್ಟ್ ಸಿಟಿ, ದಾವಣಗೆರೆ, 18004256020, ತಾಲ್ಲೂಕು ಕಛೇರಿ, ದಾವಣಗೆರೆ 9036396101, ತಾಲ್ಲೂಕು ಕಛೇರಿ, ಹರಿಹರ 08192-272959, ತಾಲ್ಲೂಕು ಕಛೇರಿ, ಜಗಳೂರು 08196-227242, ತಾಲ್ಲೂಕು ಕಛೇರಿ, ಹೊನ್ನಾಳಿ 08188-252108, ತಾಲ್ಲೂಕು ಕಛೇರಿ, ನ್ಯಾಮತಿ 8073951245, ತಾಲ್ಲೂಕು ಕಛೇರಿ, ಚನ್ನಗಿರಿ 08188-295518 ಇಲ್ಲಿ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top