Connect with us

Dvgsuddi Kannada | online news portal | Kannada news online

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ, ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಉಪ್ಪಾರ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ 1% ಮೀಸಲಾತಿ ಇರಿಸಿದೆ.

ಆಸಕ್ತರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ನವೆಂಬರ್ 03ರೊಳಗೆ ಸಲ್ಲಿಸಬಹುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.ಹೆಚ್ಚಿನ ಮಾಹಿತಿಗೆ‌ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ , ಬೆಂಗಳೂರು-32 ಅಥವಾ ನಿಗಮದ ವೈಬ್ ಸೈಟ್ http://upparadevelopment.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22252555 ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಭೇಟಿ ನೀಡಬಹುದು.

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top