ದಾವಣಗೆರೆ: ಫೆ 11 ರಿಂದ ಮೂರು ದಿನದ ದಾವಣಣಗೆರೆ ನಗರದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24ನೇ ಮಹಾ ಅಧಿವೇಶನ ಮತ್ತೆ ಅನಿರ್ದಿಷ್ಟ ಅವಧಿಗೆ ಮುಂದೂಡಿಕೆಯಾಗಿದೆ. ಅಧಿವೇಶನವನ್ನು ಫೆ.11 ರಿಂದ 13 ವರಗೆ ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ಮೂರು ದಿನದ ಕಾಲ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ಸಮಯದಲ್ಲಿ ರಾಜ್ಯ ಸರ್ಕಾರದ ಬಜೆಟ್ ಅಧಿವೇಶನ ನಡೆಯುತ್ತಿದೆ. ಇದಾದ ಬಳಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಅನಿರ್ದಿಷ್ಟ ಅವಧಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮಹಾ ಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ 2022 ಡಿಸೆಂಬರ್ ತಿಂಗಳಲ್ಲಿ ಮೂರು ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಗ ಬೆಳಗಾವಿ ಚಳಿಗಾಲ ಅಧಿವೇಶನ ಹಿನ್ನೆಲೆ ಕಾರ್ಯಕ್ರಮ ಮುಂದೂಡಲಾಗಿತ್ತು. ವಿಧಾನಸಭೆ ಚುನಾವಣೆ ಬಳಿಕ ದಾವಣಗೆರೆಯಲ್ಲಿಯೇ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



