ಡಿವಿಜಿ ಸುದ್ದಿ, ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಅಭಿಮಾನಿಗಳ ಜೊತೆ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಪ್ರಾಣಿ ಪ್ರಿಯ ದರ್ಶನ್, ಅಭಿಮಾನಿಗಳ ಮನದಲ್ಲಿ ಬಾಸ್ ಅಂತಲೇ ಕರೆಸಿಕೊಂಡವರು. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಅವರದೇ ಹಾದಿಯಲ್ಲಿ ನಡೆದಿದ್ದು, ಟೈಮ್ಸ್ ಬ್ಯುಸಿನೆಸ್ ನೀಡುವ ಉದಯೋನ್ಮುಖ ಮಹಿಳಾ ಉದ್ಯಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Overjoyed on getting this award #upcoming women entrepreneur entity# Times business award @MyFreshBasketIN 😊 pic.twitter.com/sPVOW7WkOs
— Vijayalakshmi darshan (@vijayaananth2) October 11, 2020
ಕೆಲ ದಿನಗಳ ಹಿಂದಷ್ಟೇ ವಿಜಯಲಕ್ಷ್ಮಿ ಹೊಸ ಉದ್ಯಮ ಆಂಭಿಸಿದ್ದರು. ‘ಮೈ ಫ್ರೆಶ್ ಬಾಸ್ಕೆಟ್’ ಎಂಬ ಆನ್ ಲೈನ್ ಆ್ಯಪ್ ಮೂಲಕ ರೈತರಿಗೆ ನೆರವಾಗಿದ್ದರು. ಆ ಆ್ಯಪ್ ಮೂಲಕ ರೈತರು ನೇರವಾಗಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ನೀಡಬಹುದಾಗಿತ್ತು. ಅಲ್ಲದೆ ಗ್ರಾಹಕರಿಗೂ ರೈತರಿಂದ ನೇರವಾಗಿ ತರಕಾರಿ ಹಾಗೂ ಹಣ್ಣುಗಳು ತಲುಪುತ್ತಿದ್ದವು. ಹೀಗೆ ರೈತರಿಗೆ ನೆರವಾಗುವ ಸಲುವಾಗಿ ವಿಜಯಲಕ್ಷ್ಮಿ ಅವರು ಮಾಡಿದ ಈ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.
ವಿಜಯಲಕ್ಷ್ಮಿ ಅವರು ಹೊಸದಾಗಿ ಆರಂಭಿಸಿರುವ ಆನ್‍ಲೈನ್ ಉದ್ಯಮಕ್ಕೆ ಸಂಬಂಧಪಟ್ಟಂತೆ ಇದೀಗ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಟೈಮ್ಸ್ ಬ್ಯುಸಿನೆಸ್ ನವರು ಉದಯೋನ್ಮುಖ ಮಹಿಳಾ ಉದ್ಯಮಿ ಎಂಬ ಪ್ರಶಸ್ತಿಯನ್ನು ವಿಜಯಲಕ್ಷ್ಮಿ ಅವರಿಗೆ ನೀಡಿ ಸನ್ಮಾನಿಸಿದ್ದಾರೆ. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಜೊತೆಗೆ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂತೋಷ ಹಂಚಿಕೊಂಡಿದ್ದಾರೆ.