ವಿಜಯನಗರ: ಎಗ್ ರೈಸ್ ಅಂಗಡಿಯಲ್ಲಿನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಬಳಿಯ ಸಂಕ್ಲಾಪುರದಲ್ಲಿ ನಡೆದಿದೆ.
ಶಿವಪ್ಪ(28) ಹಾಗೂ ಶ್ರೀಕಾಂತ್(23) ಮೃತ ದುರ್ದೈವಿಗಳಾಗಿದ್ದಾರೆ. ಗ್ರಾಮದ ಮೊಂಡ ಬೋರಯ್ಯ ಎಂಬುವವರ ಎಗ್ ರೈಸ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿತ್ತು. ಇದನ್ನ ನಂದಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಅಲ್ಲಿಯೇ ಸ್ಥಳದಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಭಾರೀ ಸ್ಫೋಟಕ್ಕೆ ದೇಹಗಳು ಛೀದ್ರ ಛಿದ್ರಗೊಂಡಿವೆ. ಘಟನಾ ಸ್ಥಳಕ್ಕೆ ಗುಡೇಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುದ್ದಾರೆ.



