ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಿ, ಬಳಿಕ ತಾಯಿಯೊಬ್ಬಳು ತಾನು ನೇಣಿಗೆ ಶರಣಾದ ದುರ್ಘಟನೆ ನಡೆದಿದೆ.
ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಶಿವಮ್ಮ(24) ಮೂರು ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ ಮೃತ ದುರ್ದೈವಿಗಳು.ವಿಷಯ ತಿಳಿಯುತ್ತಿದ್ದಂತೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಶಂಕೆ ವ್ಯಕ್ತವಾಗಿದೆ, ಘಟನೆ ಬಳಿಕ ಪತಿ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.