ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೊಡ ಕೆರೆ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿದ್ದು, ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಮುಂಬಯಿಯಿಂದ ಮಂಗಳೂರು ಕಡೆ ಬಸ್ ಸಂಚರಿಸುತ್ತಿತ್ತು. ಬಸ್ ನಲ್ಲಿ ಇದ್ದ ಸುಮಾರು 22 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



