ಚಿತ್ರದುರ್ಗ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೀಡುವ ಆದಿಕವಿ ಪ್ರಶಸ್ತಿಗೆ ಚಿತ್ರದುರ್ಗ ತಾಲೂಕಿನ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಆಯ್ಕೆಯಾಗಿದ್ದಾರೆ. ಇದರ ಜೊತೆ ಹೆಸರಾಂತ ಸಂಸ್ಕೃತ ವಿದ್ವಾಂಸ ಬೆಂಗಳೂರಿನ ಡಾ.ಶಂಕರ ರಾಜಾರಾಮನ್ ಅವರು ವಾಗ್ದೇವಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಎರಡೂ ಪ್ರಶಸ್ತಿಗಳು ತಲಾ ₹ 1 ಲಕ್ಷ ನಗದು, ಕಂಚಿನ ಪ್ರತಿಮೆ ಹಾಗೂ ಸನ್ಮಾನ ಪತ್ರ ಹೊಂದಿವೆ. ಫೆಬ್ರುವರಿ 21ರಂದು ಬೆಳಿಗ್ಗೆ 10.30ಕ್ಕೆ ಸಿರಿಗೆರೆ ತರಳಬಾಳು ಬೃಹನ್ಮಠದ ಗುರು ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯ ಲಿದೆ ಎಂದು ಪರಿಷದ್‌ನ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ಮಾಹಿತಿ ನೀಡಿದ್ಧಾರೆ. ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ ಅಧ್ಯಕ್ಷತೆ ವಹಿಸಲಿದ್ದಾನರೆ. ಉತ್ತರದ ಧರ್ಮಜಾಗರಣ ಪ್ರಾಂತ ಸಹ ಸಂಯೋಜಕ ಡಾ. ಹನುಮಂತ ಮಳಲಿ, ಪರಿಚದ್ ರಾಜ್ಯ ಅಧ್ಯಕ್ಷ ಪ್ರ.. ಪ್ರೇಮಶೇಖರ, ಹಿರಿಯ ಉಪಾಧ್ಯಕ್ಷ ಎಸ್.ಜಿ.ಕೋಟಿ ಇಸ್ರೋ ಮಾಜಿ ವಿಜ್ಞಾನಿ ಕೆ.ಹರೀಶ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.



