Connect with us

Dvgsuddi Kannada | online news portal | Kannada news online

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಬಾಲಕಿಯರಿಂದ ಅರ್ಜಿ ಆಹ್ವಾನ

ದಾವಣಗೆರೆ

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗೆ ಬಾಲಕಿಯರಿಂದ ಅರ್ಜಿ ಆಹ್ವಾನ

ದಾವಣಗೆರೆ:  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಜುಲೈ 2021ನೇ ಸಾಲಿನ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶ ಬಯಸುವ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ 11 ವರ್ಷದಿಂದ 13 ವರ್ಷದೊಳಗಿರುವ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 18 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಲು ನ.15 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ: 080-25589459, ಶಿವಮೊಗ್ಗ ಕಛೇರಿಯಲ್ಲಿ 08182-220925 ಜಾಲತಾಣ www.rimc.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top