ಬೆಂಗಳೂರು : ಕೊರೊನಾ ಹೊಸ ರೂಪಾಂತರ ಹಿನ್ನೆಲೆ ಬೆಂಗಳೂರಿಗೆ ಸಾರ್ವಜನಿಕ ಸ್ಥಳ, ರಸ್ತೆಯಲ್ಲಿ ಹೊಸ ವರ್ಷಾಚರಣಗೆ ಬ್ರೇಕ್ ಹಾಕಲಾಗಿದೆ.
ಬ್ರೆಟನ್ ನಿಂದ 1638 ಜನರಲ್ಲಿ14 ಜನರಿಗೆ ಕೊರೋನಾ ಪಾಸಿಟಿವ್ ಬಂಧಿರುವುದು ದೃಢಪಟ್ಟಿದೆ. ಆದರೆ, ಅದು ಹೊಸ ಪ್ರಭೇದವೇ ಎನ್ನುವ ಬಗ್ಗೆ ತಿಳಿಯಬೇಕಿದೆ. ಹೀಗಾಗಿ ಬೆಂಗಳೂರು ನಗರದಲ್ಲಿ ಸಾರ್ವಜನಿಕ ರಸ್ತೆ, ಸ್ಥಳಗಳಲ್ಲಿ ಇದೀಗ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿಲ್ಲ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತನಾಡಿ, ಗೃಹ ಸಚಿವರ ಸೂಚನೆಯ ಮೇರೆಗೆ ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸಾರ್ವಜನಿಕ ಸ್ಥಳ, ರಸ್ತೆಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಡಿಸೆಂಬರ್ 30, 31ಕ್ಕೆ ಅನ್ವಯವಾಗುವಂತೆ ಮಾರ್ಗಸೂಚಿಯನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ . ನಗರದ ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಹೊಸ ವರ್ಷಾಚರಣೆ ಮಾಡೋದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದರು.



