ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ನ.25 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 5.30 ಕ್ಕೆ ಬೆಂಗಳೂರಿನಿಂದ ನಿಗರ್ಮಸಿ 8.30 ಕ್ಕೆ ದಾವಣಗೆರೆ ಪ್ರವಾಸಿ ಮಂದಿರ (ಸಕ್ರ್ಯೂಟ್ ಹೌಸ್) ತಲುಪುವರು. ಬೆಳಿಗ್ಗೆ 9 ಕ್ಕೆ ಗಾಂಧಿನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ‘ಮನೆ ಬಾಗಿಲಿಗೆ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಒಂದು ಲಕ್ಷ ಸಸಿ ನೆಡುವ ಕಾರ್ಯಕ್ರಮ’ದಲ್ಲಿ ಭಾಗವಹಿಸುವರು. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.30 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಸಂಜೆ 4.30 ಕ್ಕೆ ಸರ್ಕಾರಿ ವಾಹನದ ಮೂಲಕ ಆನಗೋಡು ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮ ಒನ್ ಸೌಲಭ್ಯಗಳ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 4.45 ಕ್ಕೆ ಕೊಡಗನೂರು ಗ್ರಾಮದಲ್ಲಿ ಆಯೋಜಿಸಿರುವ ಗ್ರಾಮ ಒನ್ ಸೌಲಭ್ಯಗಳ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 5 ಕ್ಕೆ ಜಿಲ್ಲೆಯಿಂದ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.



