Connect with us

Dvgsuddi Kannada | online news portal | Kannada news online

ಈ ಬಾರಿ ಹೊಸ ವರ್ಷಾಚರಣೆಗಿಲ್ಲ ಅವಕಾಶ..!  

ಪ್ರಮುಖ ಸುದ್ದಿ

ಈ ಬಾರಿ ಹೊಸ ವರ್ಷಾಚರಣೆಗಿಲ್ಲ ಅವಕಾಶ..!  

ಡಿವಿಜಿ ಸುದ್ದಿ, ಬೆಂಗಳೂರು:  ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊನಾ ರಣಕೇಕೆ ಇನ್ನೂ ಕೂಡ  ನಿಂತಿಲ್ಲ. ಹೀಗಾಗಿ ಈ ಬಾರಿಯ  2021ರ ಹೊಸ ವರ್ಷದ ಸಂಭ್ರಮಾಚರಣೆಗೆ ಬಿಬಿಎಂಪಿ ಬ್ರೇಕ್ ಹಾಕಿದೆ.

ಪ್ರತಿ ವರ್ಷ ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಯಲ್ಲಿನ ವರ್ಷದ ಸಂಭ್ರಮಾಚರಣೆ ನಡೆಯುತ್ತಿತ್ತು. ಆದರೆ ಈ ಸಂಭ್ರಮಕ್ಕೆ ಇದೀಗ ಬ್ರೇಕ್ ಹಾಕಲು ನಿರ್ಧರಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಹೊಸ ವರ್ಷಾಚರಣೆಗೆ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರಿದು ಜನ ಸೇರುತ್ತಾರೆ. ಸಾಮಾಜಿಕ ಅಂತರ ಪಾಲನೆ ಮಾಡುವುದು ಕಷ್ಟಸಾಧ್ಯವಾಗುತ್ತದೆ. ಕೋವಿಡ್ ನಿಯಮ ಪಾಲನೆ ಕೂಡ ಸಾಧ್ಯವಿಲ್ಲ. ಹೀಗಾಗಿ ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಈ ಬಾರಿ  ಮೋಜು-ಮಸ್ತಿಗೆ ಕಡಿವಾಣ ಹಾಕಲು ನಿರ್ಧರಿಸಲಾಗಿದೆ ಎಂದರು.ಈ ಬಗ್ಗೆ ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ವರದಿ ನೀಡಿದ್ದು, ಸರ್ಕಾರಕ್ಕೂ ಮನವಿ ಮಾಡುವ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top