Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮ ಬಿಪಿಎಲ್ ಕಾರ್ಡ್ ದಾರರು ಏ.15 ರೊಳಗೆ ಕಾರ್ಡ್ ವಾಪಸ್ ನೀಡದಿದ್ರೆ ದಂಡ..!

ಪ್ರಮುಖ ಸುದ್ದಿ

ದಾವಣಗೆರೆ: ಅಕ್ರಮ ಬಿಪಿಎಲ್ ಕಾರ್ಡ್ ದಾರರು ಏ.15 ರೊಳಗೆ ಕಾರ್ಡ್ ವಾಪಸ್ ನೀಡದಿದ್ರೆ ದಂಡ..!

ದಾವಣಗೆರೆ: ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದವರು ಏ.15 ರೊಳಗೆ ವಾಪಸ್ ನೀಡಬೇಕು. ಇಲ್ಲದಿದ್ರೆ ಕಾನೂನು ಕ್ರಮದ ಜತೆಗೆ ದಂಡ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ಸರ್ಕಾರಿ ನೌಕರರು ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು ಮತ್ತು ಸರ್ಕಾರಿ ಅನುದಾನಿತ ನೌಕರರು, ನಿಗಮಗಳು, ಮಂಡಳಿಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.

ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದರೂ ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವವರು ಆದ್ಯತಾ(ಬಿಪಿಎಲ್)ವರ್ಗದ (ಎಎವೈ/ಪಿಹೆಚ್‍ಹೆಚ್) ಪಡಿತರ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರ ಕ್ರಮವಾಗಿರುತ್ತದೆ.

ಆದ್ದರಿಂದ ಇವರು ಏ.15 ರ ಒಳಗಾಗಿ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತವಾಗಿ ನೀಡಿದರೆ ಅಂಥವರ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top