ದಾವಣಗೆರೆ : ಟಿಪ್ಪರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಹೊತ್ತಿಕೊಂಡ ಬೆಂಕಿ, ಲಾರಿಗೂ ತಗುಲಿ, ಸುಟ್ಟು ಕರಕಲಾಗಿರುವ ಘಟನೆ ನಡೆಸಿದೆ.

ದಾವಣಗೆರೆಯ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಕಾರು, ದಾವಣಗೆರೆ ಕಡೆಯಿಂದ ಬರುತ್ತಿದ್ದಂತ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ.ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು ಕೂಡಲೇ ಸಣ್ಣಪುಟ್ಟ ಗಾಯಗಳೊಂದಿಗೆ ಕೆಳಗೆ ಇಳಿದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು, ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.facebook.com/watch/?v=3678870928857538



