ದಾವಣಗೆರೆ: ತೋಟಕ್ಕೆ ತೆರಳಿದ್ದಾಗ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೆ. ನಾಗೇಂದ್ರಪ್ಪ(66) ಮೃತ ವ್ಯಕ್ತಿ. ದೊಡ್ಡಘಟ್ಟ ಗ್ರಾಮದ ಬಳಿ ಇರುವ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಜೇನು ದಾಳಿ ಮಾಡಿದೆ.
ಹುಳುಗಳ ದಾಳಿಯಿಂದ ಪ್ರಜ್ಞೆ ಕಳೆದುಕೊಂಡಿದ್ದ ನಾಗೇಂದ್ರಪ್ಪ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



