ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ವಿಶೇಷವಾಗಿ ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾಲ್ಲೂಕಿನಲ್ಲಿರುವ ಚನ್ನಗಿರಿ, ಸಂತೇಬೆನ್ನೂರು ಮತ್ತು ಬಸವಾಪಟ್ಟಣದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಚನ್ನಗಿರಿ ಕಸಾಪ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ತಿಳಿಸಿದ್ದಾರೆ.
‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕನ್ನಡಿಗರ ಪಾತ್ರ’ ಹಾಗೂ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಕ್ಕೆ ಯುವಜನತೆಯ ಸಿದ್ದತೆ’ ಈ ವಿಷಯಗಳ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು,ಪ್ರತಿ ಕಾಲೇಜಿನಿಂದ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸೂಕ್ತ ಬಹುಮಾನವನ್ನು ನೀಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಬಸವಾಪಟ್ಟಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9448786664 ಸಂಪರ್ಕಿಸಲು ಕೋರಿದ್ದಾರೆ.



