ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದದಲ್ಲಿ ಸಂಪುಟ ವಿಸ್ತರಣೆ, ಪುನರ್ ರಚನೆಯ ಗೊಂದಲ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ವಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಬಿ ಎಲ್ ಸಂತೋಷ್ ಅವರಿಗೆ ರಮೇಶ್ ಜಾರಕಿಹೊಳಿ ವಿವರಿಸಿದರು. ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸಿದರು.ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸರ್ಕಸ್ ನಡೆಯುತ್ತಿರುವ ನಡುವೆ ರಮೇಶ್ ಜಾರಕಿಹೊಳಿ ಅವರ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.



