Connect with us

Dvgsuddi Kannada | online news portal | Kannada news online

ಜನವರಿ 31ರವರೆಗೆ ಶಾಲೆಗಳ ರಜೆ ವಿಸ್ತರಣೆ: ಶಿಕ್ಷಣ ಸಚಿವ ನಾಗೇಶ್

ಪ್ರಮುಖ ಸುದ್ದಿ

ಜನವರಿ 31ರವರೆಗೆ ಶಾಲೆಗಳ ರಜೆ ವಿಸ್ತರಣೆ: ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು: ಬೆಂಗಳೂರಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಜನವರಿ 31ರವರೆಗೆ ರಜೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಜ. 19ರ ವರೆಗೆ ಬೆಂಗಳೂರಿನಲ್ಲಿನ 1 ರಿಂದ 9ನೇ ತರಗತಿಯವರೆಗಿನ ಶಾಲೆಗಳಿಗೆ ರಜೆ ಘೋಷಿಸಿತ್ತು. ಕೊರೊನಾ  ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ವಿಸ್ತರಿಸಲಾಗಿದೆ.

ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ 10 ರಿಂದ 12 ತರಗತಿಗಳು ನಡೆಯುತ್ತಿದ್ದು, ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.  ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ದಿನಗಳಲ್ಲಿ 10 ರಿಂದ 12ನೇ ತರಗತಿಯವರೆಗಿನ ತರಗತಿಗಳನ್ನು ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರು ನಗರ ಹೊರತು ಪಡಿಸಿದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಆದರೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಇತರೆ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಹೆಚ್ಚಿದರೆ  ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top