ಬೆಂಗಳೂರು: ರಾಜ್ಯದಲ್ಲಿನ ಬಡವರಿಗೆ ಜುಲೈ ಅಂತ್ಯದೊಳಗೆ ಒಂದು ಲಕ್ಷ ಮನೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮದಿಂದ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಕರ್ನಾಟಕ ಗೃಹ ಮಂಡಳಿ ಡೈರಿ ಬಿಡುಗಡೆ ಮಾಡಿ ಮಾತನಾಡಿದರು.ರಾಜೀವ್ ಗಾಂಧಿ ವಸತಿ ನಿಗಮದಿಂದ ಜುಲೈ ಅಂತ್ಯಕ್ಕೆ ಒಂದು ಲಕ್ಷ ಮನೆಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ವಿವಿಧ ಕಡೆ 337 ಎಕರೆ ಜಮೀನು ಪಡೆದುಕೊಂಡಿದ್ದು, ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 36,000 ಮನೆಗಳು ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಾಣವಾಗುತ್ತಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 40,000 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. 2023 ರ ವೇಳೆಗೆ ಪ್ರಧಾನಿಯವರ ಆಶಯದಂತೆ ಎಲ್ಲರಿಗೂ ಸೂರು ಒದಗಿಸಲು ಸಿಎಂ ಯಡಿಯೂರಪ್ಪ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.



