ದಾವಣಗೆರೆ: ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಆಯುಷ್ ಆಸ್ಪತ್ರೆ ಶೀಘ್ರವೇ ಸೇವೆಗೆ ಲಭ್ಯವಾಗುವುದು ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಆಯುಷ್ ಇಲಾಖೆ, ಜಿಲ್ಲಾ ಪಂಚಾಯತ್ ರಾಜ್ ಸಹಯೋಗದೊಂದಿಗೆ 150 ಲಕ್ಷ ವೆಚ್ಚದಲ್ಲಿ ಆಯುಷ್ ಇಲಾಖೆಯ ಜಿಲ್ಲಾ ಕಛೇರಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ಇದೇ ಸ್ಥಳದಲ್ಲಿ ಆಯುಷ್ ಆಸ್ಪತ್ರೆ ನಿರ್ಮಿಸಬೇಕೆಂಬ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭೂಮಿಪೂಜೆ ನೇರವೇರಿಸಲಾಯಿತು. ಕಾಮಗಾರಿ ಹಣಕಾಸಿನ ವಿಳಂಬದಿಂದ ಸ್ವಲ್ಪದಿನಗಳ ಕಾಲ ತಡವಾಯಿತು. ಈಗ ಮತ್ತೆ ಇಂದಿನ ಆರೋಗ್ಯ ಸಚಿವರ ಜೊತೆ ಮಾತನಾಡಿ ಅನುದಾನ ನೀಡಲಾಗಿದೆ. ಕಾಮಗಾರಿ ಅಂತಿಮವಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲಲಿತಮ್ಮ, ಸದಸ್ಯ ಎನ್.ಎಂ.ಮಲ್ಲಿಕಾರ್ಜುನ್, ಮಾಜಿ ಸದಸ್ಯರಾದ ಶಿರಮನಹಳ್ಳಿ ರುದ್ರೇಶ್, ನಾಗಮ್ಮ ಕೇಶವಮೂರ್ತಿ ಬಡಾವಣೆಯ ಮಲ್ಲಿಕಾರ್ಜುನ್, ಜಿಲ್ಲಾ ಆಯುಷ್ ಇಲಾಖೆಯ ಡಾ.ಶಂಕರಗೌಡ, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಮುಖಂಡರಾದ ಶಶಿಕುಮಾರ್ , ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.



