ಡಿವಿಜಿಸುದ್ದಿ.ಕಾಂ, ದಾವಣಗೆರೆ: ನಗರದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಸಲುವಾಗಿ ನಗರಾದಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶಿಸಿದ್ದಾರೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸೇವನೆಯನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಸಂಬಂಧಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶಿಸಿದ್ದಾರೆ.