Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ; ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ; ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಭಗತ್ ಸಿಂಗ್ ನಗರ (ವಾರ್ಡ್ 28) ಮತ್ತು ಕೆಇಬಿ ಕಾಲೋನಿ (ವಾರ್ಡ್ 37) ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯಗಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ದಂಪತಿಗಳಾದ ಭಗತ್ ಸಿಂಗ್ ವಾರ್ಡ್ ನ ಜೆ.ಎನ್ ಶ್ರೀನಿವಾಸ್ , ಹಾಗೂ ಕೆಇಬಿ ಕಾಲೋನಿಯ ಶ್ವೇತ ಶ್ರೀನಿವಾಸ್ ಅವರಿಗೆ ಮತದಾರರು ಮತ್ತೊಮ್ಮೆ ಕೈಹಿಡಿದ್ದಾರೆ. ಇದರೊಂದಿಗೆ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತಗೆದುಕೊಂಡಿದ್ದ ಕಾಂಗ್ರೆಸ್ ಗೆ ಸೋಲಾಗಿದೆ.

ಭಗತ್ ಸಿಂಗ್ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ 2,556 ಮತ ಪಡೆದಿದ್ದು, ಕಾಂಗ್ರೆಸ್ ಅಭರ್ಥಿ ಹುಲ್ಮನಿ ಗಣೇಶ್ 18,84 ಮತ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ 681 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇನ್ನು ಕೆಇಬಿ ಕಾಲೋನಯಲ್ಲಿ ಬಿಜೆಪಿ ಅಭ್ಯರ್ಥಿ ಶ್ವೇತಾ ಶ್ರೀನಿವಾಸ್ 2096 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ರೇಖಾರಾಣಿ ಸಿದ್ದಗಂಗಾ ಶಿವಣ್ಣ 1303 ಪಡೆದಿದ್ದಾರೆ. ಈ ಮೂಲಕ ಶ್ವೇತಾ 793‌ ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಈ ಉಪ ಚುನಾವಣೆಯನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತಗೆದುಕೊಂಡ ಹಿನ್ನಲೆ ಸ್ವತಃ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡಿದ್ದರು. ಬಿಜೆಪಿ ಅಭ್ಯರ್ಥಿಗಳ ಪರ ಸಂಸದ ಜಿ.ಎಂ. ‌ಸಿದ್ದೇಶ್ವರ, ಮಾಜಿ ಸಚಿವ ಎಸ್ ಎ  ರವೀಂದ್ರನಾಥ್ ಪ್ರಚಾರ ಮಾಡಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top