ದಾವಣಗೆರೆ: ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರೀ ಬಿಸಿಲ ಧಗೆಯಿಂದ ತತ್ತರಿಸಿದ್ದ, ರಾಜ್ಯದ ಜನತೆಗೆ ಮಳೆ ತಂಪೆರೆಯಲಿದ್ದಾನೆ. ಇಂದಿಂದ ಐದು ದಿನ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಲಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ.
ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.