ಡಿವಿಜಿ ಸುದ್ದಿ, ಕೊಪ್ಪಳ: ರಾಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನಿಭಾಯಿಸಲು ಆಗಲ್ಲ, ಎಂದಿರುವ ಸತೀಶ್ ಜಾರಕಿಹೊಳಿ ತಲೆ ಸರಿ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನಿಭಾಯಿಸಲು ಸಾಧ್ಯವಿಲ್ಲ ಎಂದಿರುವ ಸತೀಶ್ ಜಾರಕಿಹೊಳಿಗೆ ದೇವರು ಒಳ್ಳೆಯದು ಮಾಡಲಿ ಎಂದರು.
ಕೊರೊನಾ ವೈರಸ್ ಜಾಗೃತಿ ಬಗ್ಗೆ ಜನರು ಸ್ಪಂದನೆ ಮಾಡಬೇಕದೆ. ಕೇಂದ್ರ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸೂಚನೆ ಮೆರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಒಂದು ವಾರದಲ್ಲಿ ಕೊರೊನಾ ವೈರಸ್ ಹತೋಟಿಗೆ ಬಂದು , ಮೊದಲಿನಂತೆ ವ್ಯಾಪಾರ ವಹಿವಾಟು ಆರಂಭವಾಗಲಿದೆ ಎಂದರು.



