ಡಿವಿಜಿಸುದ್ದಿ.ಕಾಂ ದಾವಣಗೆರೆ: ಸೂರು ಇಲ್ಲದವರಿಗೆ ಸೂರು ಕಲ್ಪಿಸಲು ಸರ್ಕಾರ ದೊಡ್ಡಬಾತಿ ಮತ್ತು ಬೂದಿಹಾಳ್ ಗ್ರಾಮದಲ್ಲಿ 75 ಎಕೆರೆ ಭೂಸ್ವಾಧೀನಕ್ಕೆ ಮುಂದಾಗಿದ್ದು, ಶೀಘ್ರವೇ ಸೂರು ಇಲ್ಲದವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರಾಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ವಿವಿಧ ವಸತಿ ಯೋಜನೆಯಡಿ ೨೪ ಸಾವಿರ ಅರ್ಜಿಗಳು ಬಂದಿವೆ. ಇವರಿಗೆ ನಿವೇಶನ ಕಲ್ಪಿಸಲು ದೊಡ್ಡಬಾತಿ ಮತ್ತು ಬೂದಿಹಾಳ್ ಗ್ರಾಮದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದ ನಂತರ ಅರ್ಹ ಅರ್ಜಿದಾರಿಗೆ ನಿವೇಶನ ಹಂಚಲಾಗುವುದು ಎಂದರು.
ಪಾಲಿಕೆಗೆ ಬಂದಿರುವ ೨೪ ಸಾವಿರ ಅರ್ಜಿಯಲ್ಲಿ ಕೂಡಲೇ ಅರ್ಹ ಫಲಾನುಭವಿಗಳನ್ನು ಗುರುತಿಸಿ. ಮನೆ ಇರುವವರನ್ನು ಗುರುತಿಸಿ ಅಂತಹ ಅರ್ಜಿಗಳನ್ನು ತಿರಸ್ಕರಿಸಿ. ವಸತಿ ಇಲ್ಲದವರಿಗೆ ವಸತಿ ಕಲ್ಪಿಸಿ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 98444603336, 7483892205