ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ದೇಶದಾದ್ಯಂತ ಇಂದು 52,050 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 853 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ 18,55,746 ಮಂದಿಗೆ ಸೋಂಕು ತಗುಲಿದ್ದು, ಈವರೆಗೆ 38,938 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 12,30,510 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,86,298 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ 4,41,228 ಜನರಿಗೆ ಸೋಂಕು ತಗುಲಿದೆ. 1,48,843 ಸಕ್ರಿಯ ಪ್ರಕರಣಗಳೊಂದಿಗೆ ಇದುವರೆಗೆ 2,76,809 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟಾರೆ 15,576 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡಿನಲ್ಲಿ 2,57,613 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 1,96,483 ಮಂದಿ ಗುಣಮುಖರಾಗಿದ್ದಾರೆ. 56,998 ಸಕ್ರಿಯ ಪ್ರಕರಣಗಳಿದ್ದು, 4,132 ಮಂದಿ ಸಾವನ್ನಪ್ಪಿದ್ದಾರೆ.
ಆಂಧ್ರ ಪ್ರದೇಶದಲ್ಲಿ 1,58,764 ಜನರಿಗೆ ಸೋಂಕು ತಗುಲಿದೆ. 74,404 ಸಕ್ರಿಯ ಪ್ರಕರಣಗಳೊಂದಿಗೆ 82,886 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,474 ಜನರು ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ 1,37,677 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದುವರೆಗೆ 4,004 ಮಂದಿ ಕೊನೆಯುಸಿರೆಳೆದಿದ್ದಾರೆ. 10,356 ಸಕ್ರಿಯ ಪ್ರಕರಣಗಳೊಂದಿಗೆ 1,23,317 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.



