ಬೆಂಗಳೂರು : ರಾಷ್ಟೀಯ ಕ್ರೀಡಾ ದಿನವನ್ನು ವಿಧಾನಸೌಧದ ಮುಂಭಾಗದಲ್ಲಿ ಆಚರಿಸಲಾಯಿತು. ಹಾಕಿ ಆಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಷ್ಟೀಯ ಕ್ರೀಡಾ ದಿನವನ್ನು ಉದ್ಘಾಟಿಸಿದ್ರು. ಭಾರತೀಯ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಫೋಟೋಗೆ ಪುಷ್ಬ ನಮನ ಸಲ್ಲಿಸಿದ್ರು. ರಾಷ್ಟೀಯ ಆಟ ಹಾಕಿಯಲ್ಲಿ ಮೇಜರ್ ಧ್ಯಾನ್ ಚಂದ್ ಅಪ್ರತಿಮ ಸಾಧನೆಯನ್ನು ಗುರುತಿಸಿ, ಆಗಸ್ಟ್ 29 ರಂದು ಅವರು ಹುಟ್ಟಿದ ದಿವನ್ನು ರಾಷ್ಟೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತಿದೆ.
ಭಾರತೀಯ ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸಾಧನೆಗೈಯಲಿ. ಅಗತ್ಯವಾದ ಉತ್ತೇಜನ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದ್ರು ಮುಖ್ಯಮಂತ್ರಿ ಬಿಎಸ್ ವೈ. ಇದಲ್ಲದೆ, ಇಲ್ಲಿವರೆಗೆ ಕ್ರೀಡಾ ಸಾಧನೆಗೈದ ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ರು.
ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಕ್ರೀಡಾ ಕ್ಷೇತ್ರದಲ್ಲಿ ಭಾರತ ಉನ್ನತ ಮಟ್ಟವನ್ನು ತಲುಪಲಿ ಎಂದು ಆಶಿಸುತ್ತೇನೆ. ಈ ನಿಟ್ಟಿನಲ್ಲಿ ಕ್ರೀಡೆಯ ಉನ್ನತಿಗೆ ಅಗತ್ಯ ಸೌಲಭ್ಯ, ಪ್ರೋತ್ಸಾಹವನ್ನು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ.
ಇಲ್ಲಿಯವರೆಗೂ ಕ್ರೀಡಾ ಕ್ಷೇತ್ರದಲ್ಲಿ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಎಲ್ಲಾ ಕ್ರೀಡಾಪಟುಗಳಿಗೂ ವಂದನೆಗಳು.
— CM of Karnataka (@CMofKarnataka) August 29, 2019



