ಡಿವಿಜಿಸುದ್ದಿ.ಕಾಂ ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ೧೨೦ ಕೋಟಿ ಅನುದಾನ ಮೀಸಲಿಟ್ಟಿದ್ದು, ನಿಲ್ದಾಣಕ್ಕೆ ನೀರು ನುಗ್ಗದಂತೆ ವ್ಯವಸ್ಥಿತವಾಗಿ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸೂಚಿಸಿದರು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರಾಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮೂರು ಅಡಿ ನೀರು ನಿಂತಿತ್ತು. ಇದರಿಂದ ಬಸ್ ನಿಲ್ದಾಣ ಕರೆಯಂತೆ ನಿರ್ಮಾಣವಾಗಿತ್ತು. ಮತ್ತೆ ನೀರು ನುಗ್ಗದಂತೆ ಕಾಮಗಾರಿಯನ್ನು ಎಚ್ಚರಿಕೆಯಿಂದ ಮಾಡಬೇಕಿದೆ.

ಈ ನಿಟ್ಟಿನಲ್ಲಿ ಒಂದೂವರೆ ಮೀಟರ್ ಎತ್ತರ ಹೆಚ್ಚಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಕಾಮಗಾರಿ ಮೇಲೆ ಅಧಿಕಾರಿಗಳು ನಿಗಾವಹಿಸಬೇಕು. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಇನ್ನೇನು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಮಂಡಕ್ಕಿ ಭಟ್ಟಿ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಇದೀಗ, ಸ್ಮಾರ್ಟ್ ಪ್ರಿನ್ಸಿಪಾಲ್ ಸೆಕ್ರೆಟರಿ, ಡಿಪಿಆರ್ ಪೆಂಡಿಂಗ್ನಲ್ಲಿಟ್ಟು ಮಂಡಕ್ಕಿ ಭಟ್ಟಿ ಅನುದಾನವನ್ನು ಬೇರೆ ಯೋಜನೆಗೆ ಬಳಸಲು ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅನುದಾನದಲ್ಲಿ ಮಂಡಕ್ಕಿಭಟ್ಟಿ ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆ ಮಾಡಿಸುವ ಬಗ್ಗೆ ಯೋಚಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ದಾವಣಗೆರೆ ಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡಲು ಆಸೆ ಇದೆ. ಶೀಘ್ರದಲ್ಲಿ ಫಾಲೋ ಆಪ್ ಮಾಡಿ ಯೋಜನೆಯ ರೂಪರೇಷ ಸಿದ್ಧಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಆಶೋಕ ರಸ್ತೆ ರೈಲ್ವೇ ಗೇಟ್ ನಲ್ಲಿ ಓವರ್ ಬ್ರಿಡ್ಜ್ ಅಥವಾ ಅಂಡರ್ ಬ್ರಿಡ್ಜ್ ಮಾಡವ ಯೋಜನೆ ಇದೆ. ಕಾಮಗಾರಿ ಕೈಗೆತ್ತಿಕೊಂಡ ಒಂದು ವರ್ಷದೊಳಗೆ ಕೆಲಸ ಮುಗಿಸಲಾಗುವು. ಇನ್ನು ಚಿತ್ರದುರ್ಗ-ದಾವಣಗೆರೆ- ತುಮಕೂರು ನೇರ ರೈಲು ಮಾರ್ಗದ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದರು.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 98444603336, 7483892205



