Connect with us

Dvg Suddi-Kannada News

ನೂತನ ಸಚಿವರಿಗೆ ಖಾತೆ ಹಂಚಿಕೆ

ರಾಜ್ಯ ಸುದ್ದಿ

ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ನೂತನ ಸಚಿವರಿಗೆ ಖಾತೆ ಹಂಚಿದ್ದಾರೆ. ಒಂದು ತಿಂಗಳ ಹಿಂದೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಯಡಿಯೂರಪ್ಪ ಕೊನೆಗೂ ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಿದ್ರು. ಹೈಕಮಾಂಡ್ ಮತ್ತು ಹಾಗೂ ಆರ್ ಎಸ್ ಎಸ್ ಜೊತೆ ಚರ್ಚಿಸಿ ಖಾತೆ ಹಂಚಿಕೆ ಪಟ್ಟಿಯನ್ನು ಅಂತಿಮಗೊಳಿಸಿದ್ರು. ಇಂದು ಬೆಳಗ್ಗೆ ರಾಜ್ಯಪಾಲ ವಜೂಬಾಯಿ ವಾಲಾ ಅವರಿಗೆ ಪಟ್ಟಿಯನ್ನು ಕಳುಹಿಸಿಕೊಡಲಾಗಿತ್ತು. ಯಡಿಯೂರಪ್ಪ ಕಳುಹಿಸಿದ ಸಚಿವರ ಪಟ್ಟಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

 

ಯಾವ ಸಚಿವರಿಗೆ ಯಾವ ಖಾತೆ

ಗೋವಿಂದ ಕಾರಜೋಳ -ಲೋಕೋಪಯೋಗಿ ಇಲಾಖೆ

ಡಾ. ಅಶ್ವತ್ಥ್ ನಾರಾಯಣ ಸಿ.ಎನ್ – ಐಟಿ-ಬಿಟಿ, ವೈದ್ಯಕೀಯ ಶಿಕ್ಷಣ

ಕೆ.ಎಸ್.ಈಶ್ವರಪ್ಪ – ಸಮಾಜ ಕಲ್ಯಾಣ

ಆರ್.ಅಶೋಕ – ಕಂದಾಯ

ಜಗದೀಶ್ ಶೆಟ್ಟರ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಬಿ.ಶ್ರೀರಾಮುಲು – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಎಸ್.ಸುರೇಶ ಕುಮಾರ್ – ಉನ್ನತ ಶಿಕ್ಷಣ

ವಿ.ಸೋಮಣ್ಣ – ವಸತಿ ಮತ್ತು ನಗರಾಭಿವೃದ್ಧಿ

ಕೋಟ ಶ್ರೀನಿವಾಸ್ ಪೂಜಾರಿ – ಮೀನುಗಾರಿಕೆ, ಬಂದರು

ಜೆ.ಸಿ. ಮಾಧುಸ್ವಾಮಿ – ಕಾನೂನು ಮತ್ತು ಸಂಸದೀಯ ವ್ಯವಹಾರ

ಚಂದ್ರಕಾಂತಗೌಡ ಚನ್ನಪ್ಪಗೌಡ ಪಾಟೀಲ್ – ಗಣಿ ಮತ್ತು ಭೂ ವಿಜ್ಞಾನ

ಜೊಲ್ಲೆ ಶಶಿಕಲಾ ಅಣ್ಣಾ ಸಾಹೇಬ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಎಚ್.ನಾಗೇಶ್ – ತೋಟಗಾರಿಕೆ

ಇನ್ನುಳಿದ ಖಾತೆಗಳು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

Continue Reading
You may also like...
Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top