ಡಿವಿಜಿ ಸುದ್ದಿ, ಬೆಂಗಳೂರು: ಭಾರೀ ಮಳೆ, ಪ್ರವಾಹದಿಂದ ರಾಜ್ಯದಲ್ಲಿ 4,000 ಕೋಟಿಯಷ್ಟು ಹಾನಿಯಾಗಿದ್ದು, ಕೇಂದ್ರ ಸರ್ಕಾರ ಪರಿಹಾರವಾಗಿ 4,000 ಕೋಟಿ ನೀಡಬೇಕು ಎಂದು ರಾಜ್ಯ ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದೆ.
ಇಂದು ಪ್ರಧಾನಿ ಜೊತೆ ವಿಡಿಯೋ ಸಂವಾದ ನಂತರ ಕಂದಾಯ ಸಚಿವ ಆರ್. ಅಶೋಕ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ಕಂದಾಯ ಸಚಿವ ಅಶೋಕ ಮಾತನಾಡಿ, ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಮನೆಗಳು, ಸರ್ಕಾರಿ ಕಟ್ಟಡಗಳು, ರಸ್ತೆ ಮತ್ತು ಸೇತುವೆ, ಬೆಳೆಗಳು ನಾಶವಾಗಿವೆ. ಅಂದಾಜು 4,000 ಕೋಟಿ ನಷ್ಟವಾಗಿದೆ. ಇನ್ನು ಪೂರ್ಣ ಪ್ರಮಾಣದ ಸಮೀಕ್ಷೆ ನಡೆಯಬೇಕಿದ್ದು, ಹೀಗಾಗಿ ಅಂದಾಜಿಸಿದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದೇವೆ ಎಂದರು.
ಮುಂಗಾರಿಗೂ ಮೊದಲೇ ಮುಂಜಾಗ್ರತೆ ಕ್ರಮಗಳನ್ನು ವಹಿಸುವ ಉದ್ದೇಶದಿಂದ 310 ಕೋಟಿ ಬಿಡುಗಡೆ ಮಾಡಿತ್ತು. ಕೇಂದ್ರ ಸರ್ಕಾರ ಮುಂಗಡ ಹಣ ನೀಡಿದರೆ ಹಾನಿಯಾಗಿದ್ದರ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬಹುದು.ಪ್ರವಾಹ, ಕಡಲ್ಕೊರೆತಕ್ಕೆ ತುತ್ತಾಗುವ 10 ಜಿಲ್ಲೆಗಳಲ್ಲಿ ಕಾಯಂ ಕಾಳಜಿ ಕೇಂದ್ರಗಳನ್ನು ಒಳಗೊಂಡ ಭವನಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 200 ಕೋಟಿ ಬಿಡುಗಡೆ ಮಾಡಲಾಗುವುದು ಎಂದರು.
ಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಗಳು
- ಎಸ್.ಡಿ.ಆರ್.ಎಫ್‌ನ ಕಂತು 395 ಕೋಟಿ ಹಣವನ್ನು ತುರ್ತಾಗಿ ಬಿಡುಗಡೆಗೆ ಆಗ್ರಹ
- ಹೆಚ್ಚುವರಿಯಾಗಿ 4 ಎನ್.ಡಿ.ಆರ್.ಎಫ್ ತಂಡಗಳನ್ನು ಕಳುಹಿಸಲು ಒತ್ತಾಯ
- ಭೂ-ಕುಸಿತಕ್ಕೆ ಸಂಬಂಧಿಸಿದಂತೆ ಮ್ಯಾಪಿಂಗ್ ಹಾಗೂ ಮುನ್ಸೂಚನಾ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಭೂ ವಿಜ್ಞಾನ ಸರ್ವೇಕ್ಷಣಾ ಇಲಾಖೆ ವತಿಯಿಂದ ಅಧ್ಯಯನ ಕೈಗೊಳ್ಳುವಂತೆ ಮನವಿ
- ಕೇಂದ್ರ ಜಲ ಆಯೋಗದ ವತಿಯಿಂದ ಕೃಷಾ ನದಿ ಪಾತ್ರದಲ್ಲಿ ಸಮಗ್ರ ಪ್ರವಾಹ ಪರಿಸ್ಥಿತಿ ಮುನ್ಸೂಚನೆ ವ್ಯವಸ್ಥೆಯನ್ನು ಸ್ಥಾಪಿಸಲು
- ಕೋರಲಾಯಿತು.ಕಡಲು ಕೊರೆತ ನಿಯಂತ್ರಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ಮನವಿ
- ಬೆಳಗಾವಿ, ರಾಯಚೂರು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ 56 ತಾಲ್ಲೂಕುಗಳ 885 ಗ್ರಾಮಗಳು ಹಾನಿಯಾಗಿವೆ
- 3 ಸಾವಿರ ಮನೆಗಳು, ಎಂಭತ್ತು ಸಾವಿರ ಹೆಕ್ಟೇರ್ ಪ್ರದೇಶದ ಕೃಷಿ, ತೋಟಗಾರಿಕೆ ಬೆಳೆಗಳು, 3,500 ಕಿ.ಮೀ ರಸ್ತೆ, 104 ಸಣ್ಣ ನೀರಾವರಿ ಕೆರೆಗಳು, ವಿದ್ಯುತ್ ಪರಿವರ್ತಕಗಳು, 394 ಕಟ್ಟಡಗಳು ಹಾನಿಯಾಗಿವೆ



