ಡಿವಿಜಿ ಸುದ್ದಿ, ರಾಮನಗರ: ಡೈರಿಗೆ ಹಾಲು ಹಾಕಲು ಟಿವಿಎಸ್ ಬೈಕ್ ನಲ್ಲಿ ತೆರಳಿದ್ದ ಯುವತಿ ಜೆಸಿಬಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ನಂಜಯ್ಯನ ಪಾಳ್ಯದ ಪ್ರಕಾಶ್ ಎಂಬವರ ಪುತ್ರಿ ಚೈತ್ರಾ (18) ಮೃತ ಯುವತಿಯಾಗಿದ್ದು, ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಾಳೆ. ಕರಲಮಂಗಲ ಗ್ರಾಮದಲ್ಲಿನ ಹಾಲಿನ ಡೈರಿಗೆ ಹಾಲು ಹಾಕಲು ಹೋಗುತ್ತಿದ್ದಾಗ ಜೆಸಿಬಿ ಡಿಕ್ಕಿ ಹೊಡೆದಿದೆ.
ಹೆಲ್ಮೆಟ್ ಹಾಕಿಕೊಳ್ಳದೆ ಬೈಕ್ ಓಡಿಸುತ್ತಿದ್ದ ಯುವತಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆ ಸಾವನ್ನಪ್ಪಿದ್ದಾಳೆ. ಮಾಗಡಿ ಪೊಲೀಸ್ ಠಾಣೆಯ ಪಿಎಸ್‍ಐ ವೆಂಕಟೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.



