ಡಿವಿಜಿಸುದ್ದಿ, ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬೆಳಗ್ಗೆ ಮೂರನೇ ಜೆಎಂಎಫ್‍ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶರು ಆರೋಪಿಗಳಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಅಲ್ಲಿದ್ದ ಸಾರ್ವಜನಿಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ಮಾಡಿದರು.
ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಪೊಲೀಸರು ಸಿಆರ್ ಪಿ 169 ಬಾಂಡ್ ಮೇಲೆ ಬಿಡುಗಡೆ ಮಾಡಿದರು. ಇದರಿಂದ ಹಿಂದೂಪರ ಸಂಘಟನೆಗಳು ಪೊಲೀಸರ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಂತರ ಪೊಲೀಸರು ಮತ್ತೊಮ್ಮೆ ಆರೋಪಿಗಳನ್ನು ವಶಕ್ಕೆ ಪಡೆದು ಇಂದು ಬೆಳಗ್ಗೆ 3ನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುವ ವೇಳೆ ನ್ಯಾಯಾಲಯದ ಆವರಣದಲ್ಲಿ ಭಾರೀ ಕಾಶ್ಮೀರ ವಿದ್ಯಾರ್ಥಿಗಳಿಗೆ ಹಿಂದೂಪರ ಸಂಘಟನೆಗಳು ಹಿಗ್ಗಾಮುಗ್ಗ ಥಳಿಸಿದದರು. ಪೊಲೀಸ್ ಜೀಪ್ ಗೆ ಬೂಟು ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಪೊಲೀಸರು ನ್ಯಾಯಾಲಯವರೆಗೂ ಕರೆ ತಂದು ವಿಶೇಷ ಕೊಠಡಿಯಲ್ಲಿ ಕೂರಿಸಿದರು. ಪೊಲೀಸರ ವರ್ತನೆಗೆ ಆಕ್ರೋಶಗೊಂಡ ನ್ಯಾಯವಾದಿಗಳು, ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ಯಾವ ವಕೀಲರು ಆರೋಪಿಗಳ ಪರ ವಕಾಲತ್ತು ಹಾಕಲಿಲ್ಲ ಎಂದರು.