ಡಿವಿಜಿ ಸುದ್ದಿ, ಬೆಂಗಳೂರು: ನಟ ಕಿಚ್ಚ ಸುದೀಪ್ ಶಿವಮೊಗ್ಗ ಜಿಲ್ಲೆಯ 4 ಸರ್ಕಾರಿ ಶಾಲೆಯನ್ನು ದತ್ತು ಪಡೆದು ಶಾಲೆಯನ್ನು ಅಭಿವೃದ್ಧಿಪಡೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲೆಗಾಗಿ ನಾವು-ನೀವು ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಿಗೆ ಅಗತ್ಯವಾದ ಪಠ್ಯಪುಸ್ತಕಗಳು, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಇಂಟರ್‌ನೆಟ್ ವ್ಯವಸ್ಥೆ, ಶೌಚಾಲಯ ನಿರ್ಮಾಣ, ಗ್ರಂಥಾಲಯ ವ್ಯವಸ್ಥೆ, ಕಂಪ್ಯೂಟರ್, ಕೊಠಡಿಗಳ ರಿಪೇರಿ, ಶಿಕ್ಷಕರಿಗೆ ಲಾಕರ್ ವ್ಯವಸ್ಥೆ, ಸುಸಜ್ಜಿತ ಅಡುಗೆ ಕೋಣೆ, ಶುದ್ಧ ಕುಡಿಯುವ ನೀರಿನ ಘಟಕ, ಆಟದ ಸಾಮಗ್ರಿಗಳು ಮುಂತಾಗಳನ್ನು ಅಭಿವೃದ್ಧಿಪಡಿಸಲು ಟ್ರಸ್ಟ್ ನಿರ್ಧಾರ ಕೈಗೊಂಡಿದೆ.
ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು pic.twitter.com/LpAVMLwQ6g
— Dr Sudhakar K (@DrSudhakar_) August 10, 2020
ನಟ ಸುದೀಪ್ ಕಾರ್ಯಕ್ಕೆ ಸಚಿವ ಡಾ.ಸುಧಾಕರ್ ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.




