Connect with us

Dvgsuddi Kannada | online news portal | Kannada news online

ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದ ನಟ ಪುನೀತ್ : ಹಾಡುವ ಮೂಲಕ ಭಕ್ತಿ ಸಮರ್ಪಣೆ

ಪ್ರಮುಖ ಸುದ್ದಿ

ಶ್ರೀ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದ ನಟ ಪುನೀತ್ : ಹಾಡುವ ಮೂಲಕ ಭಕ್ತಿ ಸಮರ್ಪಣೆ

ಡಿವಿಜಿ ಸುದ್ದಿ, ರಾಯಚೂರು: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ಮಠಕ್ಕೆ ಆಗಮಿಸಿ ನಟ ಪುನೀತ್ ರಾಜ್‍ಕುಮಾರ್ ರಾಯರ ದರ್ಶನ ಪಡೆದರು.  ಶ್ರೀ ಮಠದೊಂದಿಗೆ ತಮ್ಮ ಕುಟುಂಬದ ನೆನೆಪು ಮಾಡಿಕೊಂಡ ಪುನೀತ್,   ವಾರ ಬಂತಮ್ಮ ಗುರುವಾರ ಬಂತಮ್ಮ ಹಾಡು ಹೇಳಿ ಭಕ್ತಿ ಸಮರ್ಪಿಸಿದರು.

punith 2

ಕಳೆದ ಏಳು ದಿನಗಳಿಂದ ನಡೆಯುತ್ತಿರುವ ಗುರು ವೈಭವೋತ್ಸವದ ಕೊನೆಯ ದಿನದ ಸಮಾರಂಭದಲ್ಲಿ ಪುನೀತ್ ರಾಜ್‍ಕುಮಾರ್ ಭಾಗಿಯಾಗಿದ್ದರು. ಅವರನ್ನು ಶ್ರೀ ಮಠದಿಂದ  ಸನ್ಮಾನಿಸಲಾಯಿತು. ಸನ್ಮಾನಕ್ಕೂ ಮುನ್ನ ವೇದಿಕೆಯಲ್ಲಿ ಕುಳಿತಿದ್ದ ಪುನೀತ್ ರಾಜ್‍ಕುಮಾರ್ ತಮ್ಮ ಹಳೆಯ ನೆನಪುಗಳನ್ನು ನೆನಪಿಸಿಕೊಂಡು ಭಾವುಕರಾದರು.

ಡಾ.ರಾಜಕುಮಾರ್ ಅವರಿಗೆ ಮಂತ್ರಾಲಯದೊಂದಿಗೆ ಇದ್ದ ಅವಿನಾಭಾವ ಸಂಬಂಧದ ಬಗ್ಗೆ  ನೆನಪು ಮಾಡಿಕೊಂಡರು.  ಮಂತ್ರಾಲಯಕ್ಕೆ ಹೆಚ್ಚು ಬಾರಿ ಬರದಿದ್ದರೂ ಇಲ್ಲಿನ ನೆನಪುಗಳು ಹಾಗೇ ಇವೆ ಅಂತ ಪುನೀತ್ ಹೇಳಿದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top