ಡಿವಿಜಿ ಸುದ್ದಿ, ಮಂಡ್ಯ : ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ 27ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶಾಸಕರಾದ ಎಂ. ಶ್ರೀನಿವಾಸರವರು, ಸುರೇಶ್ ಗೌಡ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಎಸ್. ವಿ. ಸಂಕನೂರವರು, ಮಂಡ್ಯ ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್, ಸಿಇಒ ಯಾಲಕ್ಕಿಗೌಡ ಹಾಗೂ ಗಣ್ಯರು ಉಪಸ್ಥಿತರಿದ್ದರು.



