ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಹೇಗೆ ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ  ತಾಲ್ಲೂಕಿನ ಅಗಸನಕಟ್ಟೆ ಗ್ರಾಮದಲ್ಲಿ ಅಡಿಕೆ ಬೆಳೆ ಸಮಗ್ರ ನಿರ್ವಹಣೆಯ ಬಗ್ಗೆ ವೈಜ್ಞಾನಿಕ ಕ್ಷೇತ್ರ  ಹಮ್ಮಿಕೊಳ್ಳಲಾಗಿತ್ತು.

ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ. ಗ್ರಾಮದ ಆಯ್ದ ಅಡಿಕೆ ತೋಟಗಳಿಗೆ ಭೇಟಿ ನೀಡಿ ವೈಜ್ಞಾನಿಕ ಮಾಹಿತಿಯನ್ನು ನೀಡಿದರು.  ಪ್ರಸ್ತುತ ಉತ್ತಮ ಮಳೆಯಾಗುತ್ತಿದ್ದು ಪೋಷಕಾಂಶಗಳನ್ನು ನೀಡಲು ಸೂಕ್ತ ಸಮಯವಾಗಿದೆ.  ರೈತರು ೧೦ ವರ್ಷ ಮೇಲ್ಪಟ್ಟ ಗಿಡಗಳಿಗೆ 15:15:15-150 UÁæA, MOP-100 ಗ್ರಾಂ ಮತ್ತು ಲಘು ಪೋಷಕಾಂಶದ (All Micronutrient Mix)-100 ಗ್ರಾಂ ಪ್ರತೀ ಗಿಡಕ್ಕೆ ನೀಡುವುದು ಉತ್ತಮವೆಂದು ತಿಳಿಸಿದರು.

ಗೊಬ್ಬರವನ್ನು ಗಿಡದಿಂದ ಎರಡು ಅಡಿ ಅಂತರದಲ್ಲಿ ಹಾಕಿದರೆ ಉತ್ತಮ.  ನಂತರ ಹಸಿರೆಲೆಗೊಬ್ಬರದ ಗಿಡಗಳಾದ ಸೆಣಬು, ಡಯಾಂಚ, ಅವರೆ ಅಥವಾ ವೆಲೆವೆಟ್ ಬೀನ್ಸ್ಗಳನ್ನು ಬೆಳೆಯಬಹುದು.  ಇದರಿಂದ ತೋಟದ ಫಲವತ್ತತೆ ಹೆಚ್ಚುವುದಲ್ಲದೆ ಕಳೆಯ ನಯಂತ್ರಣ ಸಾಧ್ಯವೆಂದು ತಿಳಿಸಿದರು.

ಕೆಲವು ತೋಟಗಳಲ್ಲಿ ಸುಳಿ ತಿಗಣೆಯ ಭಾದೆ ಕಂಡು ಬಂದಿದ್ದು ಅದರ ನಿಯಂತ್ರಣಕ್ಕೆ ಕ್ಲೋರ್‌ಪೈರಿಫಾಸ್ 2 ಮಿಲೀ ಅಥವಾ ಡೈಮಿಥೋಯೇಟ್ 2 ಮಿಲೀ ಪ್ರತೀ ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸಬೇಕು.  ಹಾಗೆಯೇ ಅಣಬೆರೋಗ ನಿಯಂತ್ರಣಕ್ಕೆ ಈ ಸಮಯದಲ್ಲಿ ಅರ್ಕಾ ಸೂಕ್ಷಾö್ಮಣು ಜೀವಿಗಳ ಮಿಶ್ರಣವನ್ನು 10 ಮಿಲೀ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಪ್ರತೀ ಗಿಡದ ಬುಡಕ್ಕೆ 4 ಲೀಟರ್ ದ್ರಾವಣವನ್ನು ಹಾಕಬೇಕೆಂದು ರೈತರಿಗೆ ಮಾಹಿತಿ ನೀಡಿದರು.

ಸಂದರ್ಭದಲ್ಲಿ ಆನಗೋಡು ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ರವಿ,  ನವೀನ್, ರೈತರಾದ  ವಸಂತಕುಮಾರ್,  ಚನ್ನಪ್ಪ, ಕೊಟ್ರಪ್ಪ, ಕಲ್ಲೇಶಪ್ಪ,  ಚಂದ್ರಪ್ಪ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *