ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ – ವಿರೋಧ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳವಂತ ಸೂಚಿಸಿದರು.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್, ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್, ಕಾಂಗ್ರೆಸ್ ಮುಖಂಡ ಸುಭಾಷ್ ಮಲ್ಹೋತ್ರಾ, ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸಭೆಯಲ್ಲಿ ಭಾಗಿಯಾಗಿದ್ದರು.
Delhi CM Arvind Kejriwal, on if he'll ask for the Army to be called: If it is needed then I hope…But right now the action is being taken by police…We've been assured (during meeting with the Home Minister) that adequate number of police personnel will be deployed as required. https://t.co/lI4rcYYb5k pic.twitter.com/V2b7Q87RHj
— ANI (@ANI) February 25, 2020
ಹಿಂಸಾಚಾರಕ್ಕರ ಓರ್ವ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದು, ಹಲವು ಕಟ್ಟಡಗಳಿಗೆ ಬೆಂಕಿಗೆ ಹಾನಿಗೊಳಗಾಗಿವೆ. ಗೃಹ ಸಚಿವರ ಭೇಟಿ ಬಳಿಕ ಸಿಎಂ ಅರವಿಂದ್ ಕೇಜ್ರಿವಾಲ್ ಅಧಿಕಾರಿಗಳ ಸಭೆ ನಡೆಸಿದ ನಂತೆ ಮಾತನಾಡಿ, ನೆರೆಯ ರಾಜ್ಯಗಳಿಂದ ದೆಹಲಿಗೆ ಹೆಚ್ಚಿನ ಸಂಖ್ಯೆ ಹೆಚ್ಚಿದೆ. ಇದರಿಂದ ಹಿಂಸಾಚಾರ ಹೆಚ್ಚಾಗಿದೆ. ದೆಹಲಿಯ ಗಡಿಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಗಲಭೆಗಳಲ್ಲಿ ಭಾಗಿಯಾಗುವ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ದೇವಸ್ಥಾನ, ಮಸೀದಿಗಳಿಂದ ಮೈಕ್ ಮೂಲಕ ಶಾಂತಿಪಾಲನೆಗೆ ಸಂದೇಶ ಬಿತ್ತರಿಸಲಾಗುತ್ತಿದೆ. ಹಿಂಸಾಚಾರ ಪೀಡಿತ ಬೀದಿಗಳಲ್ಲಿ ಸ್ಥಳೀಯ ಶಾಸಕರು ಮತ್ತು ಪೊಲೀಸರು ಸಂಚರಿಸಿ ಶಾಂತಿ ಕಾಪಾಡಲು ಜನರಲ್ಲಿ ಮನವಿ ಮಾಡಲಿದ್ದಾರೆ. ಬೆಂಕಿ ಅನಾಹುತ ಸಂಭವಿಸಿದ ಕಡೆಗೆ ಅಗ್ನಿಶಾಮಕ ವಾಹನಗಳನ್ನು ತುರ್ತಾಗಿ ಕಳುಹಿಸಿಕೊಲಾಗುತ್ತಿದೆ ಎಂದರು.



