Connect with us

Dvgsuddi Kannada | online news portal | Kannada news online

ಆತ್ಮಹತ್ಯೆ ಮಾಡಿಕೊಂಡ ಆರೋಗ್ಯಾಧಿಕಾರಿ ಪತ್ನಿಗೆ ಸಬ್ ರಿಜಿಸ್ಟ್ರಾರ್  ಹುದ್ದೆ, 50 ಲಕ್ಷ ಪರಿಹಾರ ಘೋಷಿಸಿದ  ಸಿಎಂ

ಪ್ರಮುಖ ಸುದ್ದಿ

ಆತ್ಮಹತ್ಯೆ ಮಾಡಿಕೊಂಡ ಆರೋಗ್ಯಾಧಿಕಾರಿ ಪತ್ನಿಗೆ ಸಬ್ ರಿಜಿಸ್ಟ್ರಾರ್  ಹುದ್ದೆ, 50 ಲಕ್ಷ ಪರಿಹಾರ ಘೋಷಿಸಿದ  ಸಿಎಂ

ಡಿವಿಜಿ ಸುದ್ದಿ, ಬೆಂಗಳೂರು: ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಹಾಗೂ ಸಬ್ ರಿಜಿಸ್ಟ್ರಾರ್ ಹುದ್ದೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ಧಾರೆ.

ಈ ಕುರಿತು ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ನಿನ್ನೆ ದೈವಾಧೀನರಾದ ನಂಜನಗೂಡಿನ ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಹಾಗೂ ಮೃತರ ಪತ್ನಿಗೆ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಒಪ್ಪಿಗೆ ಸೂಚಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅನುಕಂಪದ ಆಧಾರದ ನೇಮಕಾತಿಯನ್ನು ನೀಡಬೇಕು ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ವಿಳಂಬ ಮಾಡದೆ ಪಾವತಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.ಘಟನೆಯ ನಿಷ್ಪಕ್ಷಪಾತ ಹಾಗೂ ಸಮಗ್ರವಾಗಿ ತನಿಖೆ ನಡೆಸಿ ಏಳು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಮೈಸೂರು ಪ್ರಾದೇಶಿಕ ಆಯುಕ್ತರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಡಾ. ನಾಗೇಂದ್ರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರಿ ನೌಕರರು ಒತ್ತಡಗಳಿಂದ ದೃತಿಗೆಡುವ ಅಗತ್ಯವಿಲ್ಲ. ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ ಎಂದು ಸೂಚಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top