ಡಿವಿಜಿಸುದ್ದಿ.ಕಾಂ, ದಾವಣಗೆರೆ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮಾತನಾಡುವುದನ್ನು ಕಲಿತರೆ ಜೀವನದಲ್ಲಿ ಉತ್ತಮ ಸಾಧನೆ ಸಾಧ್ಯ ಎಂದು ಹರಿಹರದ ಗಿರಿಯಮ್ಮ ಮಹಿಳಾ ಕಾಲೇಜಿನ ಪ್ರಾ೦ಶುಪಾಲ ಎಸ್. ಎಚ್. ಪ್ಯಾಟಿ ಅವರು ಹೇಳಿದರು.
ನಗರದ ಎಆರ್‌ಎಂ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಎಂಕಾಂ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಏನಾದರೂ ಸಾಧನೆ ಮಾಡಬೇಕದರೂ 10 ರಿಂದ 15 ವರ್ಷಗಳಲ್ಲಿ ಮಾತ್ರ ಸಾಧ್ಯ. ಆದ್ದರಿಂದ ಅತ್ಯಮೂಲ್ಯವಾದ ಸಮಯವನ್ನು ಕಷ್ಟಪಟ್ಟು ಓದಿ ಸಾಧನೆ ಕಡೆ ಮುನ್ನಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಾವಣಗೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಪಕ ವೆಂಕಟೇಶ್ ಬಾಬು, ವಿದ್ಯಾರ್ಥಿಗಳು ಜೀವನದಲ್ಲಿ ಕೌಶಲ್ಯ ಬೆಳಸಿಕೊಳ್ಳಬೇಕು. ಸೋಲಿಗೆ ತಲೆ ಕೆಡಿಸಿಕೊಳ್ಳಬಾರದು ತಾಳ್ಮೆಯಿಂದ ಎಲ್ಲವನ್ನೂ ಸ್ವೀಕರಿಸುವ ಗುಣ ಹೊಂದಬೇಕು ಎಂದರು.
ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಿಎಚ್ ಪ್ಯಾಟಿ, ವಿದ್ಯಾರ್ಥಿಗಳು ಹೊಸ ಹೊಸ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರಾದ ವೀಣಾ ಕುಮಾರಿ, ತ್ರಿವೇಣಿ, ಪ್ರೊ.ಗಜೇಂದ್ರ ವಿಕಾಸ್ ಮತ್ತಿತರರು ಭಾಗವಹಿಸಿದ್ದರು.