Connect with us

Dvgsuddi Kannada | online news portal | Kannada news online

ಜುಲೈ 10 ನಂತರ ಆರೋಗ್ಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಆಶಾ ಕಾರ್ಯಕರ್ತೆಯರು

ಜಿಲ್ಲಾ ಸುದ್ದಿ

ಜುಲೈ 10 ನಂತರ ಆರೋಗ್ಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ ಆಶಾ ಕಾರ್ಯಕರ್ತೆಯರು

ಡಿವಿಜಿ ಸುದ್ದಿ, ಬಳ್ಳಾರಿ: ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಜುಲೈ 10ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ.

ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಜಿಲ್ಲಾಧಿಕಾರಿ ಕಚೇರಿಯಿಂದಾಗಲಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ  ಜುಲೈ 10 ರಿಂದ ಅನಿರ್ದಿಷ್ಟಾವಧಿ ಆರೋಗ್ಯ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಕೇವಲ ಪ್ರಶಂಸೆಯಿಂದ ನಮ್ಮ ಹೊಟ್ಟೆ ತುಂಬುವುದಿಲ್ಲ. ಸರ್ಕಾರಕ್ಕೆ ನಮ್ಮ ಮೇಲೆ ನಿಜವಾದ ಗೌರವ ಇದ್ದರೆ, ಅಗತ್ಯ ಸೌಲಭ್ಯ ನೀಡಿ. ಕನಿಷ್ಠ 12 ಸಾವಿರ ಗೌರವಧನ ಹೆಚ್ಚಿಸಬೇಕು.  ಜೊತೆ ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಒತ್ತಾಯಿಸಿದರು.

ಸರ್ಕಾರ ನೀಡಿರುವ 3 ಸಾವಿರ  ಗೌರವ ಧನ ಎಲ್ಲರಿಗೂ ಕೊಟ್ಟಿಲ್ಲ. ಕೆಲವೆಡೆಗಳಲ್ಲಿ ಕೊಟ್ಟಿರುವ ಚೆಕ್ ಗಳಲ್ಲಿ ಹಣವಿಲ್ಲ ಎಂದು ದೂರಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top