ಡಿವಿಜಿ ಸುದ್ದಿ, ದಾವಣಗೆರೆ: ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ಸ್ಮರಣೆ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಮುಖಂಡರು ಅಟಲ್ಜೀ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಉತ್ತರ ಶಾಸಕ ಎಸ್ ಎ ರವೀಂದ್ರನಾಥ್, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಬಿಜೆಪಿ ಜಿಲ್ಲಾ ಅಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ಅಧ್ಯಕ್ಷ ಯಶವಂತರಾವ್ ಜಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಲಿಂಗರಾಜು ಗೌಳಿ, ಮಾಧ್ಯಮ ಪ್ರಮುಖ್ ವಿಶ್ವಾಸ್ ಹೆಚ್. ಪಿ. ಉತ್ತರ ಅಧ್ಯಕ್ಷ ಸಂಗನ ಗೌಡ್ರು, ದೇವಿಂದ್ರಪ್ಪ ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಮಹಿಳಾ ಮೋರ್ಚ ಕಾರ್ಯಕರ್ತರು ಉಪಸ್ಥಿತರಿದ್ದರು.



