ಡಿವಿಜಿ ಸುದ್ದಿ, ಬೆಂಗಳೂರು: ಉದ್ಯಮಿ,ಸಚಿವ ಭೈರತಿ ಬಸವರಾಜ ಬೆಂಬಲಿಗ ಬಾಬು ಎಂಬುವರ ಮೇಲೆ ನಿನ್ನೆ ರಾತ್ರಿ ಗುಂಡಿನ ದಾಳಿ ನಡೆದಿರುವ ಘಟನೆ ಕೆ.ಆರ್ ಪುರದಲ್ಲಿ ನಡೆದಿದೆ. ಒಬ್ಬ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಸವರಾಜ್ ಅವರ ಬೆಂಬಲಿಗರಾದ ಬಾಬು, ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಬಾಬು ಮೇಲೆ ಇಬ್ಬರು ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ.
ಗುಂಡಿನ ದಾಳಿಯಿಂದ ಬಾಬು ತಪ್ಪಿಸಿಕೊಂಡಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನಲೆಯಲ್ಲಿ ಬಾಬು ಮೇಲೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ಕೆ.ಆರ್. ಪುರ ಪೊಲೀಸರು ಹಾಗೂ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಿ. ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಬು ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.