ಡಿವಿಜಿ ಸುದ್ದಿ, ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದ್ದು, ಈ ವಿಚಾರ ಸಾರ್ವಜಿಕರಲ್ಲಿ ಆತಂಕ ಮೂಡಿಸಿದೆ. ವಿಮಾನ ನಿಲ್ದಾಣದ ಹೊರ ಭಾಗದ ಪ್ರಯಾಣಿಕರು ವಿಶ್ರಾಂತಿ ಪಡೆಯುವ ಸ್ಥಳದಲ್ಲಿ ಈ ಬ್ಯಾಗ್ ಪತ್ತೆಯಾಗಿದೆ.
ಬ್ಯಾಗ್ ಕಂಡಂತಹ ಪ್ರಯಾಣಿಕರು ಕೂಡಲೇ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಬ್ಯಾಗನ್ನು ಅಲ್ಲಿಂದ ಏರ್‌ಪೋರ್ಟ್ ಹೊರಭಾಗದ ಆವರಣಕ್ಕೆ ಕೊಂಡೊಯ್ದಿದ್ದಾರೆ. ಸ್ಥಳಕ್ಕೆ ಬಜ್ಪೆ ಠಾಣೆಯ ಪೊಲೀಸರು ಆಗಮಿಸಿದ್ದು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬ್ಯಾಗ್ ಯಾರಿಗೆ ಸೇರಿದ್ದು ಯಾಕಾಗಿ ಬಿಟ್ಟು ಹೋದರು ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ಯ ಬ್ಯಾಗನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಬ್ಯಾಗ್ ಯಾರದು ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ನಿಲ್ದಾಣದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಪೊಲೀಸರು ಅದನ್ನು ಪರಿಶೀಲನೆ ನಡೆಸುತ್ತಿದ್ದಾರೆ.



