ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಎರಡು ಸಂಘಟನೆ ನಿಷೇಧಿಸುವ ಕಾರ್ಯ ಈಗಾಗಲೇ ಆರಂಭಿಸಿದ್ದು,ಈ ಬಗ್ಗೆ ಪೊಲೀಸರಿಂದ ವಿವರವಾದ ವರದಿ ಕೇಳಿದ್ದೇವೆ. ವರದಿ ಸಲ್ಲಿಕೆಯಾದ ತಕ್ಷಣ ಕಾನೂನು ಇಲಾಖೆ ಜತೆ ಚರ್ಚಿಸಿ, ಕೇಂದ್ರಕ್ಕೆ ಸಲ್ಲಿಸಲಾಗುವುದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಎರಡು ಸಂಘಟನೆಗಳು ರಾಜ್ಯದ ಹಲವೆಡೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಸೇರಿದಂತೆ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಕೊಲೆ ಯತ್ನ, ಮಂಗಳೂರು ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ. ಈ ಎರಡು ಸಂಘಟನೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಮಾಹಿತಿ ಇದ್ದು, ಕಾಂಗ್ರೆಸ್ ಸರ್ಕಾರ ಈ ಸಂಘಟನೆಗಳ ಮೇಲಿನ ಪ್ರಕರಣ ಕೈಬಿಟ್ಟ ಬಳಿಕ ಇವರ ಚಟುವಟಿಕೆ ಇನ್ನಷ್ಟು ಹೆಚ್ಚಾಗಿದೆ.
ಭಯೋತ್ಪಾದನ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆ ಸಿಮಿ ಸಂಘಟನೆ ನಿಷೇಧವಾದ ಬಳಿಕ ಬೇರೆ ಹೆಸರಲ್ಲಿ ಸಂಘಟನೆ ಕಟ್ಟಿಕೊಂಡು ಪಿಎಫ್ಐ, ಎಸ್ಡಿಪಿಐ ವಿದೇಶಿ ಭಯೋತ್ಪಾದಕ ಸಂಘಟನೆಗಳ ಸಂಕರ್ಪದಲ್ಲಿದ್ದಾರೆ ಎಂದರು.



