ಡಿವಿಜಿ ಸುದ್ದಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜಯನಗರದ ಈಸ್ಟ್ ಎಂಡ್ ವೃತ್ತದ ಬಳಿ ಬಿಎಂಸಿಟಿ ಬಸ್ ಬ್ರೇಕ್ ಫೇಲ್ ಆದ ಕಾರಣ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಬ್ರೇಕ್ ಫೇಲ್ ಆಗಿದ್ದರಿಂದ ಚಾಲನ ನಿಯಂತ್ರಣ ತಪ್ಪ ಎದುರುಗಡೆ ಬಂದ ಕಾರ್, ಸವಾರ ಮೇಲೆ ಬಸ್ ಚಾಲನೆ ಆಗಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಇತ್ತೀಚೆಗಷ್ಟೇ ಸುಮ್ಮನಹಳ್ಳಿಯಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್ ನಿಂದ ಮತ್ತೊಂದು ಅಪಘಾತ ನಡೆದಿದೆ.
ಬಸ್‌ನ ನಿಯಂತ್ರಣ ಕಳೆದುಕೊಂಡಿದ್ದ ಚಾಲಕ ಎದುರುಗಡೆಯ ಐದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಯಿತು. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.



