ಡಿವಿಜಿಸುದ್ದಿ.ಕಾಂ, ದಾವಣಗೆರೆ ದೇಶದಲ್ಲಿ ವಿವಿಧ ಬ್ಯಾಂಕುಗಳನ್ನು ವಿಲೀನ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಅ.19 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.
ಅ.22 ರಂದು ಬ್ಯಾಂಕ್ ನೌಕರರು ಆಯಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದ್ದು, ದೇಶದಾದ್ಯಂತ ಒಂದು ದಿನ ಬ್ಯಾಂಕಿಂಗ್ ವ್ಯವಹಾರ ಸ್ಥಗಿತಗೊಳ್ಳಲಿದೆ. ಈ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ.
ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಈ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (ಬಿ.ಇ.ಎಫ್.ಐ.) ಕೂಡ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದೆ. 22 ರಂದು 11 ಘಂಟೆಗೆ ಮಂಡಿಪೇಟೆ ಮುಷ್ಕರ ನಡೆಯಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಎಲ್ಲಾ ಸದಸ್ಯರು, ಪಿಗ್ಮಿ ಸಂಗ್ರಹಕಾರರು, ನಿವೃತ್ತ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ತಿಳಿಸಿದ್ದಾರೆ.
ಬ್ಯಾಂಕ್ ಗಳ ವಿವಿಧ ಬೇಡಿಕೆಗಳು
- ಬ್ಯಾಂಕುಗಳ ವಿಲೀನ ಪ್ರಕ್ರಿಯೆಯನ್ನು ಕೈಬಿಡಬೇಕು ಮತ್ತು ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟುಬಲಗೊಳಿಸಬೇಕು
- ಬ್ಯಾಂಕಿಂಗ್ ನಿಯಮಾವಳಿಗಳಿಗೆ ತಿದ್ದುಪಡಿ ಮಾಡುವ ನೌಕರ ವಿರೋಧಿ ನೀತಿಗಳನ್ನು ನಿಲ್ಲಿಸಬೇಕು
- ವಸೂಲಾಗದ ಸಾಲವನ್ನು ವಸೂಲಿ ಮಾಡಲು ಕಠಿಣವಾದ ಕಾನೂನುಗಳನ್ನು ರೂಪಿಸಬೇಕು.
- ಬ್ಯಾಂಕ್ ಕಮಿಷನ್ ಮತ್ತು ಸೇವಾ ಶುಲ್ಕವನ್ನು ಹೆಚ್ಚಿಸುವುದರ ಮೂಲಕ ಗ್ರಾಹಕರಿಗೆ ಹೊರೆ ಮಾಡಬಾರದು ಹಾಗೂ ಗ್ರಾಹಕರಿಗೆ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಬೇಕು.
- ಉದ್ಯೋಗ ಮತ್ತು ಉದ್ಯೋಗ ಭದ್ರತೆಯನ್ನು ದುರ್ಬಲಗೊಳಿಸಬಾರದು
- ಬ್ಯಾಂಕುಗಳಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಮಾಡಬೇಕು.